ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೋಯ್ಡಾ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮಗುವನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತೆಯ ಕುಟುಂಬವು ಬಾಡಿಗೆದಾರರಾಗಿ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರ ಪ್ರಕಾರ, ಏಪ್ರಿಲ್ 7 ರಂದು ಸೂರಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ಲಾ ಗ್ರಾಮದ ಬಾಡಿಗೆ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದು, ಅದಾದ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ.

ಏಪ್ರಿಲ್ 8 ರಂದು ಬಾಲಕಿಯ ತಂದೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು ಮತ್ತು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಅವರ ಪತ್ನಿ ಕೂಡ ಮಾರುಕಟ್ಟೆಗೆ ತೆರಳಿದ್ದರು. ಅಲ್ಲಿಂದ ಮನೆಗೆ ಹಿಂತಿರುಗಿದಾಗ ಅವರ ಎರಡು ವರ್ಷದ ಮಗಳು ಕಾಣೆಯಾಗಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅವರು ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ಸೂರಜ್‌ಪುರ ಪೊಲೀಸ್ ಠಾಣೆಗೆ ಏಪ್ರಿಲ್ 8 ರಂದು ಹುಡುಗಿಯ ತಂದೆ ದೂರು ನೀಡಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ (ಸೆಂಟ್ರಲ್ ನೋಯ್ಡಾ) ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 363ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆಕೆಯ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿದೆ.

ಭಾನುವಾರ ಅದೇ ಕಟ್ಟಡದ ಮನೆಯೊಂದರಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ಅಲ್ಲಿಗೆ ತಲುಪಿದಾಗ ಮಗುವಿನ ಮೃತದೇಹವು ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ದೀಕ್ಷಿತ್ ಹೇಳಿದರು.
ಬಾಲಕಿಯ ಮೃತದೇಹ ಪತ್ತೆಯಾದ ಮನೆಯಲ್ಲಿ ವಾಸವಾಗಿದ್ದ ವ್ಯಕ್ತಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯವನಾಗಿದ್ದು, ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಎಸಿಪಿ (ಸೆಂಟ್ರಲ್ ನೋಯ್ಡಾ- 3) ಸುಮಿತ್ ಶುಕ್ಲಾ ಮಾತನಾಡಿ, ಸೋಮವಾರ ಲಭ್ಯವಾಗಿರುವ ಮಗುವಿನ ಮರಣೋತ್ತರ ಪರೀಕ್ಷೆಯು ಆಕೆಯನ್ನು ಉಸಿರುಗಟ್ಟಿ ಸಾಯಿಸಲಾಗಿದೆ ಎಂದು ತಿಳಿದುಬಂದಿದೆ. ಶಂಕಿತ ಮತ್ತು ಬಾಲಕಿಯ ತಂದೆ ಇಬ್ಬರೂ ದಿನಗೂಲಿ ಕೆಲಸಗಾರರು ಎಂದು ತಿಳಿಸಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!