ದೇಶ

ಸಂವಿಧಾನ ರಕ್ಷಿಸುವ ಬಗ್ಗೆ ಸೋನಿಯಾ ಗಾಂಧಿ ಮಾತು ಅತ್ಯಂತ ಅಪ್ರಬುದ್ಧ ಹೇಳಿಕೆ: ಕಿರಣ್ ರಿಜಿಜು ತಿರುಗೇಟು

Ramyashree GN

ನವದೆಹಲಿ: ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆಗಾಗಿ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯನ್ನು 'ಅತ್ಯಂತ ಅಪ್ರಬುದ್ಧತೆಯ ಹೇಳಿಕೆ' ಎಂದು ಕಾನೂನು ಸಚಿವ ಕಿರಣ್ ರಿಜಿಜು ಮಂಗಳವಾರ ಬಣ್ಣಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರವು 'ಎಲ್ಲ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ' ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಆರೋಪಿಸಿದ ನಂತರ ರಿಜಿಜು ಅವರನ್ನು ಗೇಲಿ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಪ್ರತಿಯೊಂದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಚುನಾವಣೆ ಸಮೀಪಿಸುತ್ತಿರುವ ಹಲವು ಪ್ರಮುಖ ರಾಜ್ಯಗಳಲ್ಲಿ ತಮ್ಮ ಪಕ್ಷ ಈ ಸಂದೇಶವನ್ನು ನೇರವಾಗಿ ಜನರಿಗೆ ತಲುಪಿಸುತ್ತದೆ ಮತ್ತು ಸಂವಿಧಾನ ರಕ್ಷಣೆಗಾಗಿ ಸಮಾನ ಮನಸ್ಕ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಕೈಜೋಡಿಸಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.

'ದಿ ಹಿಂದೂ'ನಲ್ಲಿನ ಒಪೆಡ್‌ ಪುಟದಲ್ಲಿ, ಸೋನಿಯಾ ಗಾಂಧಿಯವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು 'ವ್ಯವಸ್ಥಿತವಾಗಿ ಮುಗಿಸುತ್ತಿದೆ' ಎಂದು ಆರೋಪಿಸಿದರು. ಅವರ ಈ ಕ್ರಮಗಳು ಪ್ರಜಾಪ್ರಭುತ್ವದ ಬಗ್ಗೆ 'ಬೇರೂರಿರುವ ಆಳವಾದ ತಿರಸ್ಕಾರ'ವನ್ನು ಪ್ರದರ್ಶಿಸುತ್ತವೆ ಎಂದು ಹೇಳಿದರು.

ರಿಜಿಜು ಟ್ವಿಟರ್‌ನಲ್ಲಿ ಸೋನಿಯಾ ಗಾಂಧಿಗೆ ತಿರುಗೇಟು ನೀಡಿದ್ದು, 'ಸೋನಿಯಾ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ಮಾಡುತ್ತಿದ್ದಾರೆಯೇ? ಕಾಂಗ್ರೆಸ್ ಪಕ್ಷವು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದೆ: ಇದೊಂದು ಅತ್ಯಂತ ಅಪ್ರಬುದ್ಧತೆಯ ಹೇಳಿಕೆ' ಎಂದು ಅವರು ಹೇಳಿದರು.

SCROLL FOR NEXT