ಅಮಿತ್ ಶಾ 
ದೇಶ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶದಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ದಿಬ್ರುಗಢ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶದಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ದಿಬ್ರುಗಢದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಶಾನ್ಯ ರಾಜ್ಯದ 14 ಲೋಕಸಭಾ ಸ್ಥಾನಗಳಲ್ಲಿ ಕೇಸರಿ ಪಕ್ಷವು 12 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ ಶಾ, 'ಈಶಾನ್ಯ ಪ್ರದೇಶವನ್ನು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಕೋಟೆ ಎಂದು ಪರಿಗಣಿಸಲಾಗಿತ್ತು. ಆದರೆ, ರಾಹುಲ್ ಗಾಂಧಿಯವರ ಯಾತ್ರೆ (ಭಾರತ್ ಜೋಡೋ ಯಾತ್ರೆ) ಹೊರತಾಗಿಯೂ, ಈ ಪ್ರದೇಶದ ಮೂರು ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ ಎಂದು ದೂರಿದರು.

ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಡೆದಿದೆ. ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸಿತು ಮತ್ತು ಇತರ ಎರಡು ರಾಜ್ಯಗಳಲ್ಲಿ ಮೈತ್ರಿ ಮೂಲಕ ಅಧಿಕಾರಕ್ಕೇರಿದೆ.

ಲಂಡನ್ ಪ್ರವಾಸದ ವೇಳೆ ರಾಹುಲ್ ಗಾಂಧಿಯವರ ವಿವಾದಾತ್ಮಕ ಹೇಳಿಕೆಗಳನ್ನು ಪ್ರಸ್ತಾಪಿಸಿದ ಶಾ, 'ಅವರು (ರಾಹುಲ್ ಗಾಂಧಿ) ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಇದೇ ರೀತಿ ಮುಂದುವರಿದರೆ, ಈಶಾನ್ಯ ಮಾತ್ರವಲ್ಲ ಇಡೀ ದೇಶದಲ್ಲೇ ಕಾಂಗ್ರೆಸ್ ವೈಟ್ ವಾಶ್ ಆಗಲಿದೆ. ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಎಷ್ಟು ಕೆಟ್ಟದಾಗಿ ಟೀಕಿಸುತ್ತಾರೋ ಅಷ್ಟು ಬಿಜೆಪಿ ಬೆಳೆಯುತ್ತದೆ ಎಂದು ಹೇಳಿದರು.

ವಿವಾದಾತ್ಮಕ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ, 1958 ಅಥವಾ ಎಎಫ್ಎಪಿಎ ಅನ್ನು ಅಸ್ಸಾಂನ ಶೇ 70ರಷ್ಟು ಪ್ರದೇಶದಿಂದ ತೆಗೆದುಹಾಕಲಾಗಿದೆ. ಬೋಡೋಲ್ಯಾಂಡ್ ಮತ್ತು ಕರ್ಬಿ ಆಂಗ್ಲಾಂಗ್ ಪ್ರದೇಶಗಳು ಶಾಂತಿಯುತವಾಗಿವೆ ಮತ್ತು ಅದರ ನೆರೆಯ ಪ್ರಾಂತ್ಯಗಳೊಂದಿಗೆ ರಾಜ್ಯದ ಗಡಿ ವಿವಾದಗಳನ್ನು ಪರಿಹರಿಸಲಾಗುತ್ತಿದೆ ಎಂದು ಶಾ ಹೇಳಿದರು.

ಏನಿದು ಕಾಯ್ದೆ?

ಆಂತರಿಕ ಗಲಭೆಗಳು ಮುಂತಾದ ತೊಡಕುಗಳನ್ನು ನಿಭಾಯಿಸಲು ಸಾಧ್ಯವಾಗದ ರಾಜ್ಯ ಸರ್ಕಾರಗಳಿಗೆ ನೆರವು ನೀಡುವ ಉದ್ದೇಶದಿಂದ ಎಎಫ್‌ಎಸ್‌ಪಿಎಯನ್ನು ಜಾರಿಗೆ ತರಲಾಗಿತ್ತು. ಸರ್ಕಾರವು 'ತೊಡಕು' ಎಂದು ಗುರುತಿಸಿದ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಲು ಎಎಫ್‌ಎಸ್‌ಪಿಎ ಕಾಯ್ದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರ ಹಾಗೂ ಕಾನೂನಿನ ರಕ್ಷಣೆ ನೀಡುತ್ತದೆ. 

ಈ ಪ್ರದೇಶಗಳಲ್ಲಿ ಭಾರತೀಯ ಸೇನೆ, ವಾಯುಪಡೆ ಹಾಗೂ ಕೇಂದ್ರ ಅರೆಸೇನಾ ಪಡೆಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಅಧಿಕಾರವನ್ನು ಪಡೆಯುತ್ತವೆ. ಕಾನೂನು ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುವ ಯಾರ ಮೇಲೆಯಾದರೂ ಗುಂಡು ಹಾರಿಸುವ ಅಧಿಕಾರವನ್ನು ಈ ಕಾಯ್ದೆ ನೀಡುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT