ದೇಶ

ಕೋವಿಡ್ ಹೆಚ್ಚಳ: ಕೋರ್ಟ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಪಾಲಿಸಲು 'ಸುಪ್ರೀಂ' ಸೂಚನೆ

Srinivas Rao BV

ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ದೆಹಲಿಯಲ್ಲಿ ಸೋಮವಾರ 484 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.26.58 ಕ್ಕೆ ಏರಿಕೆಯಾಗಿದೆ. ಸೋಂಕು ಪತ್ತೆ ಪರೀಕ್ಷೆಗೆ ಬರುವ ಪ್ರತಿ ನಾಲ್ಕು ಮಂದಿಯಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿರುವುದು ಸ್ಥಳೀಯ ಆರೋಗ್ಯ ಇಲಾಖೆ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.

"ದೆಹಲಿಯಲ್ಲಿ ವರದಿಯಾದ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ, ಮಾಸ್ಕ್ ಧರಿಸುವುದು, ಹ್ಯಾಂಡ್ ಸ್ಯಾನಿಟೈಸರ್‌ಗಳ ಆಗಾಗ್ಗೆ ಬಳಕೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು ಸೇರಿದಂತೆ ತಡೆಗಟ್ಟುವ ಕ್ರಮಗಳನ್ನು ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಗಮನಿಸುವಂತೆ ಸಕ್ಷಮ ಪ್ರಾಧಿಕಾರವು ನಿರ್ದೇಶಿಸಿದೆ" ಎಂದು ಏಪ್ರಿಲ್ 10 ರಂದು. ಸುತ್ತೋಲೆ ಹೊರಡಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಏ.11 ರಂದು 5,676 ಹೊಸ ಕೊರೋನವೈರಸ್ ಸೋಂಕುಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳು 37,093 ಕ್ಕೆ ಏರಿದೆ. ಇನ್ನು 21 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 5,31,000ಕ್ಕೆ ಏರಿಕೆಯಾಗಿದೆ.

SCROLL FOR NEXT