ನಿರಶನ ನಿರತ ಸಚಿನ್ ಪೈಲಟ್ 
ದೇಶ

ಪೈಲಟ್ ವಿರುದ್ಧ ಶಿಸ್ತು ಕ್ರಮ; ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ

ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಚಿನ್ ಪೈಲಟ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಂಧವಾ ತಿಳಿಸಿದ್ದಾರೆ.

ನವದೆಹಲಿ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಚಿನ್ ಪೈಲಟ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಂಧವಾ ತಿಳಿಸಿದ್ದಾರೆ 

ಸಚಿನ್ ಪೈಲಟ್ ಪ್ರಸ್ತಾಪಿಸಿರುವ ಭ್ರಷ್ಟಾಚಾರದ ವಿಷಯವನ್ನು ನಾನೂ ಒಪ್ಪುತ್ತೇನೆ ಆದರೆ ಅದನ್ನು ಪ್ರಸ್ತಾಪಿಸಿರುವ ರೀತಿ ಸರಿ ಇಲ್ಲ ಎಂದು ಸಚಿನ್ ಪೈಲಟ್ ನಿರಶನದ ಬಗ್ಗೆ ಸುಖ್ಜಿಂದರ್ ಸಿಂಗ್ ಹೇಳಿದ್ದಾರೆ. 

ಈ ಹಿಂದೆ ಸಚಿನ್ ಪೈಲಟ್ ನಡೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆ ರೀತಿ ಮಾಡಲಿಲ್ಲ ಈ ಬಾರಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಷ್ಟೇ ಹೇಳಿರುವ ಸುಖ್ಜಿಂದರ್ ಸಿಂಗ್ ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ಹಿಂದಿನ ಸರ್ಕಾರದ ಅಕ್ರಮಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ; ಇಂದು ದೆಹಲಿಯಲ್ಲಿ ಸಚಿನ್ ಪೈಲಟ್
 
ಪೈಲಟ್ ನಿರಶನಕ್ಕೆ ಸಂಬಂಧಿಸಿದಂತೆ ಘಟನೆಗಳನ್ನು ಅಧ್ಯಯನ ಮಾಡಿ ವರದಿ ನೀಡುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ರಾಂಧವ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪೈಲಟ್ ಅವರ ನಿರಶನ ಹಾಗೂ ರಾಜಸ್ಥಾನದಲ್ಲಿನ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿದ್ದರು. 

ರಾಜಸ್ಥಾನದ ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದ ಸಚಿನ್ ಪೈಲಟ್ ಕಾಂಗ್ರೆಸ್ ನ ಎಚ್ಚರಿಕೆಗೂ ಜಗ್ಗದೇ ತಮ್ಮದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೈಪುರದಲ್ಲಿ ನಿರಶನ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT