ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದಲ್ಲಿ ಏರಿಕೆಯ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 7,830 ಸೋಂಕು ಪತ್ತೆ, 40 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಸಂಗ್ರಹ ಚಿತ್ರ
Manjula VN
Updated On : 12 Apr 2023, 2:23 pm

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,04,771ಕ್ಕೆ ತಲುಪಿದೆ.

Advertisement

Advertisement

ಇದನ್ನೂ ಓದಿ: ಚುನಾವಣೆ ಮೇಲೆ ಕೋವಿಡ್ ಕರಿನೆರಳು: ಆತಂಕ ಬದಿಗೊತ್ತಿ ಮತದಾನ ಮಾಡುತ್ತಾರೆಯೇ ಜನತೆ?

ಇನ್ನು ಭಾರತದಲ್ಲಿ ಒಂದೇ 2,14,242 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,32,67,524 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ  220,66,24,326 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement