ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಿತೀಶ್, ತೇಜಸ್ವಿ 
ದೇಶ

ದೆಹಲಿ: ರಾಹುಲ್ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಿತೀಶ್, ತೇಜಸ್ವಿ

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ...

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಹ ಉಪಸ್ಥಿತರಿದ್ದರು.

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಮಾತುಕತೆಯ ನಡುವೆಯೇ ಖರ್ಗೆ ಅವರ ನಿವಾಸದಲ್ಲಿ ಬಿಹಾರ ಸಿಎಂ ಮತ್ತು ಡಿಸಿಎಂ ಈ ಸಭೆ ನಡೆದಿದೆ.

ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಖರ್ಗೆ ಇತ್ತೀಚೆಗೆ ಹಲವಾರು ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಖರ್ಗೆ ಸಂಪರ್ಕಿಸಿದ್ದು, ಮುಂದಿನ ವಾರಗಳಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಬಹುದು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!