ದೇಶ

ಗಡ್ಕರಿಗೆ ಬೆದರಿಕೆ: ಡಿ-ಗ್ಯಾಂಗ್, ಎಲ್ಇಟಿ, ಪಿಎಫ್ಐ ಗೆ ಸಂಬಂಧಿಸಿದ ವ್ಯಕ್ತಿ ಬಂಧನ

Srinivas Rao BV

ನವದೆಹಲಿ: ಕೇಂದ್ರ ರಸ್ತೆ, ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. 

ಗಡ್ಕರಿ ಕಚೇರಿಗೆ ಕರೆ ಮಾಡಿದ್ದ ವ್ಯಕ್ತಿ ದಾವೂದ್ ಇಬ್ರಾಹಿಂ ಗ್ಯಾಂಗ್, ಲಷ್ಕರ್-ಎ-ತೊಯ್ಬಾ, ಪಿಎಫ್ಐ ಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಕರೆ ಮಾಡಿದ ವ್ಯಕ್ತಿ ಜಯೇಶ್ ಪೂಜಾರಿ ಅಲಿಯಾಸ್ ಕಂಥಾ, ಅಲಿಯಾಸ್ ಸಲೀಮ್ ಶಾಹಿರ್ ಕಾಂತ ಎಂದು ಗುರುತಿಸಲಾಗಿದ್ದು, ಈತ ಕೊಲೆಯ ಪ್ರಕರಣದ ಅಪರಾಧಿಯಾಗಿದ್ದಾನೆ. ಜನವರಿ ಹಾಗೂ ಮಾರ್ಚ್ ತಿಂಗಳಲ್ಲಿ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಈತ ಕರೆ ಮಾಡಿ ಬೆದರಿಕೆ ಹಾಕಿದ್ದ. 

ಈತನ ವಿರುದ್ಧ ನಗರದ ಧಾಂತೋಳಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗೆ ದಾವೂದ್ ಗ್ಯಾಂಗ್, ಪಿಎಫ್‌ಐ ಮತ್ತು ಎಲ್‌ಇಟಿಯೊಂದಿಗೆ ಆತನಿಗೆ ಸಂಪರ್ಕವಿದೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದ್ದಾರೆ. ಜನವರಿ 14 ರಂದು ಪೂಜಾರಿ ಗಡ್ಕರಿ ಕಚೇರಿಗೆ ಕರೆ ಮಾಡಿ ದಾವೂದ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡು 100 ಕೋಟಿ ರೂಗಳಿಗೆ ಬೇಡಿಕೆ ಇಟ್ಟಿದ್ದ. 

SCROLL FOR NEXT