ಸುಪ್ರೀಂ ಕೋರ್ಟ್ 
ದೇಶ

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ನೀಡಿದೆ.

ನವದೆಹಲಿ: ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಗಮನಿಸಿತು. 

ನಾನು ನಿನ್ನೆ ನ್ಯಾಯಾಲಯದಲ್ಲಿ ಇದನ್ನು (ಮನವಿ) ಪ್ರಸ್ತಾಪಿಸಿದೆ. ಇದು ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವುದಕ್ಕೆ ವಿರುದ್ಧವಾಗಿದೆ ಎಂದು ಸಿಬಲ್ ಹೇಳಿದರು.

ಆದರೆ, (ಅರ್ಜಿಯಲ್ಲಿರುವ) ದೋಷಗಳನ್ನು ಸರಿಪಡಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಅರ್ಜಿಯಲ್ಲಿದ್ದ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ಸಿಬಲ್ ತಿಳಿಸಿದರು.

ಸರಿ, ನಾವು ಅದನ್ನು ವಿಚಾರಣೆಗೆ ಪಟ್ಟಿ ಮಾಡುತ್ತೇವೆ ಎಂದು ಪೀಠ ಹೇಳಿದೆ.

ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಿದ್ದ ಶೇ 4ರಷ್ಟು ಮೀಸಲಾತಿಯನ್ನು ಈಗ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ 2ಸಿ ಅಡಿ ಬರುವ ಒಕ್ಕಲಿಗರು ಮತ್ತು ಇತರ ಸಮುದಾಯಗಳಿಗೆ ಹಾಗೂ ಪ್ರವರ್ಗ 2ಡಿ ಅಡಿ ಬರುವ ವೀರಶೈವ ಲಿಂಗಾಯತ ಮತ್ತು ಇತರ ಸಮುದಾಯಗಳಿಗೆ ಹಂಚಿಕೆ ಮಾಡಲಾಗಿದೆ.

ಕರ್ನಾಟಕ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮತ್ತು ಇತರೆಡೆಗಳಲ್ಲಿ ಮೀಸಲಾತಿ) ಕಾಯ್ದೆ– 1990ರ ಅನ್ವಯ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಸರ್ಕಾರದ ಹುದ್ದೆಗಳಲ್ಲಿ ಶೇಕಡ 4ರಷ್ಟನ್ನು, ಹಿಂದುಳಿದ ವರ್ಗಗಳ ಪ್ರವರ್ಗ 2ಬಿ ಅಡಿಯಲ್ಲಿ ಬರುವ ಮುಸ್ಲಿಮರಿಗೆ ಮೀಸಲಾಗಿರಿಸಲಾಗಿತ್ತು.

ಈಗ ಮುಸ್ಲಿಮರು ಇಡಬ್ಲ್ಯುಎಸ್‌ (ಆರ್ಥಿಕವಾಗಿ ದುರ್ಬಲ ವರ್ಗಗಳು) ಕೋಟಾ ಅಡಿಯಲ್ಲಿ ಶೇ 10ರಷ್ಟು ಮೀಸಲಾತಿಗೆ ಅರ್ಹರಾಗುತ್ತಾರೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಮೀಸಲಾತಿ ಮಿತಿಯನ್ನು ಈಗ ಸುಮಾರು ಶೇ.57ಕ್ಕೆ ತಳ್ಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್