ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ತನಿಖಾ ತಂಡದ ಪ್ರಶ್ನೆಗಳಿಗೆ ಉತ್ತರಿಸಲು ಕೇಜ್ರಿವಾಲ್ ಅವರಿಗೆ ಏಪ್ರಿಲ್ 16 ರಂದು ಬೆಳಗ್ಗೆ 11 ಗಂಟೆಗೆ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಬಂಧಿಸಿದೆ.

ಕಿಕ್ ಬ್ಯಾಕ್ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ‘ಮದ್ಯ ಲಾಬಿ’ಯ ಪರವಾದ ನೀತಿಗಾಗಿ ವಿವಿಧ ಮಧ್ಯವರ್ತಿಗಳಿಂದ ಹಣ ಪಡೆದು ಅದನ್ನು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ವಿಶೇಷವಾಗಿ ಎಎಪಿ ನಾಯಕರಿಗೆ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಎಎಪಿ ಸ್ಪಷ್ಟವಾಗಿ ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು