ಡಾ ಬಿ ಆರ್ ಅಂಬೇಡ್ಕರ್(ಸಂಗ್ರಹ ಚಿತ್ರ) 
ದೇಶ

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ: ಭಾರತ ಕಂಡ ಶ್ರೇಷ್ಟ ನಾಯಕನ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ

ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್. 

ನವದೆಹಲಿ: ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್. 

ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ. 

ಅಂಬೇಡ್ಕರ್ ಅವರ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ: ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.

1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ತಮ್ಮ ಜೀವನದಲ್ಲಿ ಮುಖ್ಯವಾಗಿ ಹೋರಾಟ ನಡೆಸಿದ್ದು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು 'ಮೂಕನಾಯಕ' ಎಂಬ ಪತ್ರಿಕೆಯನ್ನು ಆರಂಭಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ.

ಅಂಬೇಡ್ಕರ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. "ಹಿಂದೂ ರಾಜ್ ಸತ್ಯವಾದರೆ, ಅದು ಈ ದೇಶಕ್ಕೆ ದೊಡ್ಡ ವಿಪತ್ತಾಗುವುದರಲ್ಲಿ ಸಂದೇಹವಿಲ್ಲ" ಎಂದು ಹೇಳಿದ್ದರು.

ಅವರು ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಭಾರತ ಸರ್ಕಾರ ಮರಣೋತ್ತರ 'ಭಾರತ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT