ಸಂಬಲ್‌ಪುರ 
ದೇಶ

ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಸಂಬಲ್‌ಪುರದಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ ಮುಂದುವರಿಕೆ

ಒಡಿಶಾದ ಸಂಬಲ್‌ಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು ಶನಿವಾರ ಇಂಟರ್ನೆಟ್ ಸೇವೆ ಸ್ಥಗಿತದ ಅವಧಿಯನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಲಾಗಿದೆ.

ಭುವನೇಶ್ವರ/ಸಂಬಲ್‌ಪುರ: ಒಡಿಶಾದ ಸಂಬಲ್‌ಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು ಶನಿವಾರ ಇಂಟರ್ನೆಟ್ ಸೇವೆ ಸ್ಥಗಿತದ ಅವಧಿಯನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಲಾಗಿದೆ.

ನಿನ್ನೆ ರಾತ್ರಿ ನಡೆದ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದು, ಸಂಬಲ್‌ಪುರ ಪಟ್ಟಣದ ರಿಂಗ್ ರೋಡ್ ಬಳಿ ಚೂರಿ ಇರಿತ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಆರೋಪಿಯು ಕ್ರಿಮಿನಲ್ ಹಿನ್ನಲೆ ಹೊಂದಿದ್ದಾನೆ ಮತ್ತು ಅವನು ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದನು. ನಮ್ಮ ಪ್ರಾಥಮಿಕ ತನಿಖೆಯು ಕೊಲೆಯಲ್ಲಿ ಇನ್ನೂ ಒಬ್ಬರು ಭಾಗಿಯಾಗಿದ್ದಾರೆ ಮತ್ತು ಆ ಆರೋಪಿ ತಲೆಮರೆಸಿಕೊಂಡಿದ್ದಾನೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದರು.

ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಸುಮಾರು 35 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

"ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಮತ್ತು ಶೀಘ್ರದಲ್ಲೇ ಸಹಜ ಸ್ಥಿತಿಗೆ ಬರುವ ನಿರೀಕ್ಷೆಯಿದೆ" ಎಂದು ಡಿಜಿಪಿ ಸುನಿಲ್ ಕುಮಾರ್ ಬನ್ಸಾಲ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕಳೆದ ಬುಧವಾರ ಹನುಮ ಜಯಂತಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಳ್ಳು ವದಂತಿಗಳ ಹರಡುವಿಕೆ ತಡೆಯಲು ಒಡಿಶಾ ಸರ್ಕಾರ ಗುರುವಾರ ಬೆಳಗ್ಗೆ 10 ರಿಂದ 48 ಗಂಟೆಗಳ ಕಾಲ  ಸಂಬಲ್ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಸಿತ್ತು.

ಬುಧವಾರ ಸಂಜೆ ಹನುಮ ಜಯಂತಿ ಆಚರಿಸುತ್ತಿದ್ದ ಬೈಕ್  ರ್‍ಯಾಲಿಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿತ್ತು. ಇದರಲ್ಲಿ ಪೊಲೀಸ್ ಮಹಿಳೆ ಸೇರಿದಂತೆ ಕನಿಷ್ಠ 10 ಪೊಲೀಸರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಇದುವರೆಗೆ ಸುಮಾರು 43 ಜನರನ್ನು ಬಂಧಿಸಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!