ಅತೀಕ್ ಅಹ್ಮದ್ 
ದೇಶ

ಉತ್ತರ ಪ್ರದೇಶ: ಮಾಧ್ಯಮಗಳು, ಪೊಲೀಸರ ಎದುರೇ ಅತೀಕ್ ಅಹ್ಮದ್, ಸಹೋದರನ ಗುಂಡಿಕ್ಕಿ ಹತ್ಯೆ

ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ...

ಪ್ರಯಾಗ್​ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ವೈದ್ಯಕೀಯ ತಪಾಸಣೆಗಾಗಿ ಈ ಇಬ್ಬರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗಲೇ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ನೆಲಕ್ಕೆ ಬಿದ್ದ ಅಹ್ಮದ್ ಮತ್ತು ಆತನ ಸಹೋದರನ ಮೇಲೆ ಕನಿಷ್ಠ ಇಬ್ಬರು ವ್ಯಕ್ತಿಗಳು ಹತ್ತಿರದಿಂದ ಗುಂಡು ಹಾರಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಗುಂಡಿನ ದಾಳಿ ನಡೆಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸನ್ನಿ, ಲವಲೇಶ್ ಮತ್ತು ಅರುಣ್ ಎಂದು ಗುರುತಿಸಲಾಗಿದ್ದು, ದಾಳಿಕೋರರು ಮಾಧ್ಯಮದವರಂತೆ ವೇಷ ಧರಿಸಿದ್ದರು ಎನ್ನಲಾಗಿದೆ.

ಅತೀಕ್ ಅಹ್ಮದ್ ಪುತ್ರ ಅಸದ್​ನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಪೊಲೀಸರು ಏಪ್ರಿಲ್ 13 ರಂದು ಎನ್​ಕೌಂಟ್ ಮಾಡಿದ ಬೆನ್ನಲ್ಲೇ ಈ ಗುಂಡಿನ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ