ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 10,089 ಹೊಸ ಕೇಸ್ ಪತ್ತೆ, 19 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,089 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,089 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,18,115ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,114ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,542ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,29,459ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,79,853 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,40,57,685 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,26,324 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT