ದೇಶ

ಪತ್ರಕರ್ತರ ಸೋಗಿನಲ್ಲಿದ್ದ ವ್ಯಕ್ತಿಗಳಿಂದ ಅತೀಕ್ ಅಹ್ಮದ್ ಹತ್ಯೆ; ಪತ್ರಕರ್ತರಿಗಾಗಿ ಎಸ್ಒಪಿ ಸಿದ್ಧಪಡಿಸಲು ಕೇಂದ್ರ ನಿರ್ಧಾರ

Ramyashree GN

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ), ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ಒಪಿ) ಸಿದ್ಧಪಡಿಸುತ್ತದೆ ಎಂದು ಅವರು ಹೇಳಿದರು.

ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಪರ್ತಕರ್ತರ ಸೋಗಿನಲ್ಲಿದ್ದ ಮೂವರು ದುಷ್ಕರ್ಮಿಗಳು ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದಾದ ಬಳಿಕ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಶನಿವಾರ ರಾತ್ರಿ ಪೊಲೀಸ್ ಸಿಬ್ಬಂದಿ ತಪಾಸಣೆಗಾಗಿ ಇಲ್ಲಿನ ವೈದ್ಯಕೀಯ ಕಾಲೇಜಿಗೆ ಅತೀಕ್ ಮತ್ತು ಸೋದರನನ್ನು ಕರೆದೊಯ್ಯುತ್ತಿದ್ದಾಗ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಆರೋಪಿಗಳು ಕೃತ್ಯ ಎಸಗಿದ್ದರು. 

SCROLL FOR NEXT