ವರುಣ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ವಾರಣಾಸಿಯ ಬಲಪಂಥೀಯ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವರುಣ್ ಗಾಂಧಿ

ತಮ್ಮ ಟ್ವಿಟರ್ ಖಾತೆಯಲ್ಲಿ ಬಲಪಂಥೀಯ ಗುಂಪಿನ ಪದಾಧಿಕಾರಿ ಎಂದು ಪರಿಚಯಿಸಿಕೊಂಡಿರುವ ವಾರಣಾಸಿ ಮೂಲದ ವಿವೇಕ್ ಪಾಂಡೆ ವಿರುದ್ಧ ಪಿಲಿಭಿತ್ ಸಂಸದ ವರುಣ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಫಿಲಿಭಿತ್: ತಮ್ಮ ಟ್ವಿಟರ್ ಖಾತೆಯಲ್ಲಿ ಬಲಪಂಥೀಯ ಗುಂಪಿನ ಪದಾಧಿಕಾರಿ ಎಂದು ಪರಿಚಯಿಸಿಕೊಂಡಿರುವ ವಾರಣಾಸಿ ಮೂಲದ ವಿವೇಕ್ ಪಾಂಡೆ ವಿರುದ್ಧ ಪಿಲಿಭಿತ್ ಸಂಸದ ವರುಣ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಾರ್ಚ್ 29ರಂದು ತಮ್ಮ ದಿವಂಗತ ತಂದೆ ಸಂಜಯ್ ಗಾಂಧಿ ಕುರಿತು ಪಾಂಡೆ ಅವರು ತಮ್ಮ ಟ್ವಿಟರ್ ಹ್ಯಾಂಡಲ್, '@vivekkumar_IND' ಮೂಲಕ ಪೋಸ್ಟ್ ಮಾಡಿದ ಕೆಲವು ಅವಹೇಳನಕಾರಿ ಕಮೆಂಟ್‌ಗಳ ವಿರುದ್ಧ ವರುಣ್ ಗಾಂಧಿ ಅವರು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ II, ಅಭಿನವ್ ತಿವಾರಿ ಅವರನ್ನು ಸಂಪರ್ಕಿಸಿದ್ದಾರೆ.

ಪಾಂಡೆ ತನ್ನ ತಂದೆಯನ್ನು 'ಕೆಟ್ಟದಾಗಿ ಬಿಂಬಿಸಿದ್ದಾರೆ' ತೋರಿಸಿದ್ದಾರೆ ಮತ್ತು ಅವರ ಬಗ್ಗೆ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಗಾಂಧಿ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಈ ಕಟ್ಟುಕಥೆ ಮತ್ತು ಸುಳ್ಳು ಟ್ವೀಟ್ ಅನ್ನು ಆರೋಪಿಯು ತನ್ನ ದಿವಂಗತ ತಂದೆ ಮತ್ತು ಅವರ ಕುಟುಂಬದ ಮಾನಹಾನಿ ಮಾಡುವ ಉದ್ದೇಶದಿಂದ ಪೋಸ್ಟ್ ಮಾಡಿದ್ದಾನೆ. ಈ ಪೋಸ್ಟ್ ನಮ್ಮ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಅವರು ಹೇಳಿದರು.

ಪಿಲಿಭಿತ್‌ನ ಹಿರಿಯ ವಕೀಲೆ ಅಶ್ವಿನಿ ಅಗ್ನಿಹೋತ್ರಿ, ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಆರೋಪಿಗೆ ಮಾನನಷ್ಟಕ್ಕಾಗಿ ಎರಡು ವರ್ಷಗಳ ಅವಧಿಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್