ಬಟಿಂಡಾ ಸೇನಾ ನೆಲೆ 
ದೇಶ

ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಯೋಧರ ಹತ್ಯೆ ಸಂಬಂಧ ಯೋಧನೋರ್ವನ ಬಂಧನ

ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ.

ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. 

ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ, ಏಪ್ರಿಲ್ 12 ರಂದು, ಬಟಿಂಡಾದ ಸೇನಾ ಠಾಣೆಯೊಳಗೆ ಮಲಗಿದ್ದ ನಾಲ್ವರು ಯೋಧರನ್ನು ಗುಂಡಿಕ್ಕಿ ಕೊಲ್ಲಲಾಯಿತು.

ಪಂಜಾಬ್ ಪೊಲೀಸರ ಪ್ರಕಾರ, ಬಂಧಿತನನ್ನು ಸೇನೆಯ ಗನ್ನರ್ ಎಂದು ಹೇಳಲಾಗುತ್ತಿದೆ. ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಪರಸ್ಪರ ವಾಗ್ವಾದದಲ್ಲಿ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಬಟಿಂಡಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಳಿ ಕುರ್ತಾ ಪೈಜಾಮಾ ಧರಿಸಿ, ಮುಖ ಮತ್ತು ತಲೆಗೆ ಬಟ್ಟೆಯಿಂದ ಮುಚ್ಚಿಕೊಂಡಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿಯ ನಂತರ ಬ್ಯಾರಕ್‌ನಿಂದ ಹೊರಬರುವುದನ್ನು ನೋಡಿದ್ದೇನೆ ಎಂದು ದೇಸಾಯಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.

ಅವರಲ್ಲಿ ಒಬ್ಬರ ಬಳಿ ಐಎನ್‌ಎಸ್‌ಎಎಸ್ ರೈಫಲ್ ಮತ್ತು ಇನ್ನೊಬ್ಬರ ಬಳಿ ಕೊಡಲಿ ಇತ್ತು ಎಂದು ಅವರು ಪೊಲೀಸ್ ಎಫ್‌ಐಆರ್‌ನಲ್ಲಿ ಹೇಳಿದ್ದರು. ಬಟಿಂಡಾ ಮಿಲಿಟರಿ ನಿಲ್ದಾಣವು ದೇಶದ ಅತಿದೊಡ್ಡ ಸೇನಾ ನೆಲೆಗಳಲ್ಲಿ ಒಂದಾಗಿದೆ ಮತ್ತು ಸೇನೆಯ ಹಲವಾರು ಕಾರ್ಯಾಚರಣೆ ಘಟಕಗಳನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT