ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 18 Apr 2023, 7:09 pm

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ-ಪುಣೆ ಹೆದ್ದಾರಿಯ ರಾವೆಟ್ ಕಿವಾಲೆ ಪ್ರದೇಶದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

"ಕೆಲವರು ಬಿರುಗಾಳಿಯಿಂದ ಕಬ್ಬಿಣದ ಹೋರ್ಡಿಂಗ್ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೋರ್ಡಿಂಗ್ ಅವರ ಮೇಲೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡರು" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisement

Advertisement

ಇದನ್ನು ಓದಿ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭ: ಬಿಸಿಲಿನ ಝಳಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ

ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಯಾರಾದರೂ ಹೋರ್ಡಿಂಗ್ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಯೇ ಎಂದು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments