ದೇಶ

ಕ್ರೌಡ್ ಫಂಡಿಂಗ್ 'ದುರುಪಯೋಗ' ಪ್ರಕರಣ: ಟಿಎಂಸಿಯ ಸಾಕೇತ್ ಗೋಖಲೆಗೆ ಸುಪ್ರೀಂ ಕೋರ್ಟ್ ಜಾಮೀನು!

Vishwanath S

ನವದೆಹಲಿ: ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿರುವುದನ್ನು ಪ್ರಮುಖವಾಗಿ ಗಮನಿಸಿ ಸಾಕೇತ್ ಗೋಖಲೆಗೆ ಜಾಮೀನು ನೀಡಿದೆ.

ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ 2022ರ ಡಿಸೆಂಬರ್ 30ರಂದು ಗೋಖಲೆ ಅವರನ್ನು ದೆಹಲಿಯಲ್ಲಿ ಬಂಧಿಸಿತು.

ಸಾಕೇತ್ ಐಪಿಸಿಯ ಸೆಕ್ಷನ್ 420(ವಂಚನೆ), 406 ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ) ಮತ್ತು 467(ನಕಲಿ) ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾರೆ.

SCROLL FOR NEXT