ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ದಿನವೊಂದರಲ್ಲಿ 7,633 ಹೊಸ ಪ್ರಕರಣ, 61 ಸಾವಿರ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಆವರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಪ್ರಾತಿನಿಧಿಕ ಚಿತ್ರ
Ramyashree GN
Updated On : 18 Apr 2023, 10:13 am

ನವದೆಹಲಿ: ದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಆವರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈವರೆಗೆ ದೇಶದಲ್ಲಿ ಕೋವಿಡ್‌ನಿಂದ 5,31,152 ಮಂದಿ ಮೃತಪಟ್ಟಿದ್ದಾರೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ  ಎಂದು ಸಚಿವಾಲಯ ತಿಳಿಸಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement