ಅನುರಾಗ್ ಠಾಕೂರ್ 
ದೇಶ

ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ.

ಇಂತಹ ಚರ್ಚೆಗಳು ಅಧಿಕಾರದ ಪಡಸಾಲೆಯಲ್ಲಿ ಸಹಜವಾಗಿರುವಂಥದ್ದಾಗಿದೆ. ಇಂತಹ ಸುದ್ದಿಗಳನ್ನು ಆನಂದಿಸಬೇಕು ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಠಾಕೂರ್ ತಿಳಿಸಿದ್ದಾರೆ. 

2019 ರ ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬಲಪಡಿಸುವ ಕೆಲಸದ ನಿಮಿತ್ತ ಅನುರಾಗ್ ಠಾಕೂರ್ ಮುಂಬೈ ಗೆ ಭೇಟಿ ನೀಡಿದ್ದಾಗ ಪತ್ರಕರ್ತರು ಎನ್ ಸಿಪಿಯಲ್ಲಿನ ಬೆಳವಣಿಗೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

ಈ ಬಾರಿ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ಭರವಸೆ ಇದೆ. ಪ್ರಧಾನಿ ಮೋದಿ ಹಲವು ಯೋಜನೆಗಳ ಮೂಲಕ ಬಡವರ ಸಬಲೀಕರಣ ಮಾಡಿದ್ದಾರೆ. ಬಡವರು, ಮಧ್ಯಮವರ್ಗದವರು ಹಾಗೂ ವ್ಯಾಪಾರಿಗಳ ಆಶೀರ್ವಾದ ಪ್ರಧಾನಿ ಮೋದಿ ಅವರ ಮೇಲಿರಲಿದೆ ಎಂದು ಠಾಕೂರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT