ಕಾರ್ತಿ ಚಿದಂಬರಂ 
ದೇಶ

ಹಣ ವರ್ಗಾವಣೆ ಪ್ರಕರಣ: ಕಾರ್ತಿ ಚಿದಂಬರಂಗೆ ಸೇರಿದ 11.04 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ

ಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ನಾಲ್ಕು ಆಸ್ತಿಗಳ ಪೈಕಿ ಒಂದು ಸ್ಥಿರಾಸ್ತಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಕಾರ್ತಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದು, ಐಎನ್‌ಎಕ್ಸ್ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿಯಿಂದ ಬಂಧಿಸಲ್ಪಟ್ಟಿದ್ದಾರೆ.

ಚಿದಂಬರಂ ಯುಪಿಎ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಗೆ ಅನುಮೋದನೆಗೆ ಸಂಬಂಧಿಸಿದಂತೆ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಿಂದ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT