ಪ್ರತ್ಯಕ್ಷ ದೃಶ್ಯ 
ದೇಶ

ಪೂಂಚ್‌: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!

ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. 

ಜಮ್ಮು: ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. 

ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ಇಬ್ಬರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಇದರೊಂದಿಗೆ ಯೋಧರ ವಾಹನಕ್ಕೆ ಬೆಂಕಿ ತಗುಲಿದ ಹಿಂದೆ ಭಯೋತ್ಪಾದಕರ ಸಂಚು ಇದೆಯೋ ಅಥವಾ ಅಪಘಾತವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸೇನಾ ವಾಹನದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಈ ಅಪಘಾತದಲ್ಲಿ ಇಬ್ಬರು ಸೇನಾ ಯೋಧರು ಹುತಾತ್ಮರಾದ ಸುದ್ದಿ ಮುನ್ನೆಲೆಗೆ ಬಂದಿದೆ. ಆದರೆ, ಹುತಾತ್ಮ ಯೋಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಭಟದುಡಿಯನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಅಪಘಾತಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಹೊರಬಿದ್ದಿದೆ. ಇದರಲ್ಲಿ ಸೇನಾ ವಾಹನದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ಯೋಧರು ಹೊರಬರುವುದಕ್ಕೂ ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ. ಇನ್ನು ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವ ಢವ, ತಣ್ಣಗಾದ ಟ್ರಂಪ್!

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

SCROLL FOR NEXT