ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 12,591 ಹೊಸ ಕೇಸ್ ಪತ್ತೆ, 29 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,580 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,580 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,57,992ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,230ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 65,286ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,61,476ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 2,40,014 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92.46,17,164 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,28,332 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!