ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ 
ದೇಶ

ನರೋಡಾ ಗಾಮ್ ಹತ್ಯಾಕಾಂಡ: ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲಾ 67 ಆರೋಪಿಗಳು ಖುಲಾಸೆ

ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.  

ಅಹಮದಾಬಾದ್: ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. 2002ರಲ್ಲಿ ನಡೆದಿದ್ದ ಕೋಮು ಹಿಂಸಾಚಾರದಲ್ಲಿ ಮುಸ್ಲಿಂ ಸಮುದಾಯದ 11 ಮಂದಿಯನ್ನು ಹತ್ಯೆಗೈಯಲಾಗಿತ್ತು.  ಪ್ರಕರಣದಲ್ಲಿ ಒಟ್ಟು 86 ಆರೋಪಿಗಳಿದ್ದು, ಅವರಲ್ಲಿ 18 ಮಂದಿ ಮಧ್ಯಂತರದಲ್ಲಿ ಸಾವನ್ನಪ್ಪಿದ್ದಾರೆ.

ಆರೋಪಿಗಳು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 143 (ಕಾನೂನುಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧಗಳಿಂದ ಶಸ್ತ್ರಸಜ್ಜಿತವಾದ ಗಲಭೆ), 120 (ಬಿ) (ಕ್ರಿಮಿನಲ್ ಪಿತೂರಿ) 150 ( ಕೋಮು ಹಿಂಸಾಚಾರಕ್ಕೆ ಪ್ರಚೋದನೆ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದರು. ಎಸ್ ಐಟಿ  ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಸ್‌ಕೆ ಬಾಕ್ಸಿ ನ್ಯಾಯಾಲಯ ಗುರುವಾರ 68 ಆರೋಪಿಗಳ ವಿರುದ್ಧ ತೀರ್ಪು ಪ್ರಕಟಿಸಿದೆ. 

ಫೆಬ್ರವರಿ 27, 2002 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಕೋಚ್​ಗೆ ಬೆಂಕಿ ಹಚ್ಚಿದ್ದರಿಂದ 58 ಜನರು, ಬಹುತೇಕವಾಗಿ ಅಯೋಧ್ಯೆಯಿಂದ ಮರಳುತ್ತಿದ್ದ ಕರಸೇವಕರು ಸಾವನ್ನಪ್ಪಿದ್ದರು. ಮಾರನೇ ದಿನ ಅಹಮದಾಬಾದ್ ನಗರದ ನರೋಡಾ ಗಾಮ್ ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ 11 ಮಂದಿಯನ್ನು ಕೊಂದು ಹಾಕಲಾಗಿತ್ತು. 

2010 ರಲ್ಲಿ ಆರಂಭವಾದ ವಿಚಾರಣೆಯ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ 187 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿತು ಮತ್ತು ಸುಮಾರು 13 ವರ್ಷಗಳ ಕಾಲ ಆರು ನ್ಯಾಯಾಧೀಶರು ಸತತವಾಗಿ ಪ್ರಕರಣದ ನೇತೃತ್ವ ವಹಿಸಿದ್ದರು ಎಂದು ವಿಶೇಷ ಪ್ರಾಸಿಕ್ಯೂಟರ್ ಸುರೇಶ್ ಶಾ ಹೇಳಿದರು. ಸೆಪ್ಟೆಂಬರ್ 2017 ರಲ್ಲಿ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಯಾ ಕೊಡ್ನಾನಿ ಪರ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದರು.

ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರ್ಕಾರದಲ್ಲಿ ಸಚಿವರಾಗಿದ್ದ ಕೊಡ್ನಾನಿ ಅವರು 97 ಜನರನ್ನು ಕಗ್ಗೊಲೆ ಮಾಡಿದ ನರೋಡಾ ಪಾಟಿಯಾ ಗಲಭೆ ಪ್ರಕರಣದಲ್ಲಿ ಅಪರಾಧಿ ಮತ್ತು 28 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.ನಂತರ ಆಕೆಯನ್ನು ಗುಜರಾತ್ ಹೈಕೋರ್ಟ್ ಬಿಡುಗಡೆಗೊಳಿಸಿತು.

ನರೋಡಾ ಗಾಮ್ ಹತ್ಯಕಾಂ ಪ್ರಕರಣದಲ್ಲಿ ಆಕೆಯ ಮೇಲೆ ಗಲಭೆ, ಕೊಲೆ ಮತ್ತು ಕೊಲೆ ಯತ್ನದ ಜೊತೆಗೆ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿತ್ತು.  2002ರ ನಡೆದ ಒಂಬತ್ತು ಪ್ರಮುಖ ಕೋಮು ಗಲಭೆ ಪ್ರಕರಣಗಳಲ್ಲಿ ಒಂದಾಗಿದ್ದ ನರೋಡಾ ಗಾಮ್‌ನಲ್ಲಿ ನಡೆದ ಹತ್ಯಾಕಾಂಡ ಕುರಿತು ಎಸ್ ಐಟಿ ಮತ್ತು ವಿಶೇಷ ನ್ಯಾಯಾಲಯ ತನಿಖೆ ಮತ್ತು ವಿಚಾರಣೆ ನಡೆಸುತ್ತಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT