ಪರ್ವತ (ಸಾಂಕೇತಿಕ ಚಿತ್ರ) 
ದೇಶ

ನೇಪಾಳದಲ್ಲಿನ ಮೌಂಟ್ ಅನ್ನಪೂರ್ಣದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಪತ್ತೆ!

ನೇಪಾಳದಲ್ಲಿರುವ ಮೌಂಟ್ ಅನ್ನಪೂರ್ಣದ ಕ್ಯಾಂಪ್ ನಿಂದ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ಮಲು ಎಂಬುವವರು ಪತ್ತೆಯಾಗಿದ್ದಾರೆ.

ನವದೆಹಲಿ: ನೇಪಾಳದಲ್ಲಿರುವ ಮೌಂಟ್ ಅನ್ನಪೂರ್ಣದ ಕ್ಯಾಂಪ್ ನಿಂದ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ಮಲು ಎಂಬುವವರು ಪತ್ತೆಯಾಗಿದ್ದಾರೆ.

ಅನುರಾಗ್ ಮಲು ಮೌಂಟ್ ಅನ್ನಪೂರ್ಣ ನ್ನು ಇಳಿಯುತ್ತಿದ್ದಾಗ ಕ್ಯಾಂಪ್ 3 ರಿಂದ ಸೋಮವಾರದಂದು, ನಾಪತ್ತೆಯಾಗಿದ್ದರು. ಆದರೆ ಅವರು 6000 ಮೀಟರ್ ಎತ್ತರದಿಂದ ಕಂದಕಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು.

ಇದನ್ನೂ ಓದಿ: ನೇಪಾಳದಲ್ಲಿನ ಮೌಂಟ್ ಅನ್ನಪೂರ್ಣದಲ್ಲಿ ಭಾರತದ ಪರ್ವತಾರೋಹಿ ಬಲ್ಜಿತ್ ಕೌರ್ ನಾಪತ್ತೆ!
 
ಗುರುವಾರದಂದು ಮಲು ಅವರ ಸಹೋದರ ಮಾತನಾಡಿದ್ದು, ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ರಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ರಾಜಸ್ಥಾನದ ಕಿಶನ್ಘರ್ ನ ನಿವಾಸಿಯಾಗಿರುವ ಮಲೂ (34)  ಮೌಂಟ್ ಅನ್ನಪೂರ್ಣದ ಕ್ಯಾಂಪ್ 3 ರಿಂದ ಇಳಿಯುತ್ತಿದ್ದಾಗ ಉರುಳಿಬಿದ್ದು ನಾಪತ್ತೆಯಾಗಿದ್ದರು. ಮೌಂಟ್ ಅನ್ನಪೂರ್ಣ ಜಗತ್ತಿನಲ್ಲಿ 10 ನೇ ಅತಿ ಎತ್ತರದ ಪರ್ವತವಾಗಿದೆ. 

"ಪರ್ವತಾರೋಹಿ ಅನುರಾಗ್ ಮಲು ಜೀವಂತವಾಗಿ ಪತ್ತೆಯಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರು ಜೀವಂತವಾಗಿದ್ದಾರೆ" ಎಂದು ಅನುರಾಗ್ ಅವರ ಸಹೋದರ ಸುಧೀರ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!