ಸಾಂದರ್ಭಿಕ ಚಿತ್ರ 
ದೇಶ

ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ನಾಲ್ಕನೇ ಪ್ರಕರಣ

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಚೆನ್ನೈ: ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವರ್ಷದಲ್ಲಿ ವರದಿಯಾದ ನಾಲ್ಕನೇ ಪ್ರಕರಣವಾಗಿದೆ. 2018 ರಿಂದ ಆಗಿರುವ 12 ನೇ ಪ್ರಕರಣವಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ಪ್ರಾಥಮಿಕ ತನಿಖೆ ನಡೆಯುತ್ತಿದೆ ಎಂದು  ಚೆನ್ನೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದಕ್ಕೂ ಮುನ್ನ ಏಪ್ರಿಲ್ 2 ರಂದು ಇದೇ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಎಚ್‌ಡಿ ವಿದ್ಯಾರ್ಥಿ ತಮಿಳುನಾಡಿನ ವೇಲಾಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT