ರಾಹುಲ್ ಗಾಂಧಿ 
ದೇಶ

ಲೋಕಸಭಾ ಸದಸ್ಯತ್ವ ಅನರ್ಹತೆ; ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ: ವರದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ವರದಿಯ ಪ್ರಕಾರ, ರಾಹುಲ್ ಗಾಂಧಿಯವರ ವಸ್ತುಗಳನ್ನು ಅವರ ತಾಯಿ ಸೋನಿಯಾ ಗಾಂಧಿಯವರ 10 ಜನಪಥ್ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ.

ಬಿಜೆಪಿ ಸಂಸದ ಸಿ.ಆರ್.ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು, 2005ರಿಂದ ರಾಹುಲ್ ಗಾಂಧಿ ವಾಸಿಸುತ್ತಿದ್ದ 12 ತುಘಲಕ್ ಲೇನ್ ಬಂಗಲೆಯನ್ನು ಏಪ್ರಿಲ್ 22 ರೊಳಗೆ ತೆರವು ಮಾಡುವಂತೆ ಅವರಿಗೆ ಪತ್ರ ಕಳುಹಿಸಿತ್ತು.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿತ್ತು.

2019ರಲ್ಲಿ ಚುನಾವಣಾ ರ್ಯಾಲಿ ವೇಳೆ ಮೋದಿ ಉಪನಾಮ ಹೊಂದಿರುವವರು ಕಳ್ಳರು ಎಂದು ಹೇಳಿದ್ದರು. ಈ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಅಲ್ಲದೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಕೆಳ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಗಾಂಧಿಯವರು ಮೇಲ್ಮನವಿಗಾಗಿ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಸೂರತ್‌ನ ಸೆಷನ್ಸ್ ಕೋರ್ಟ್ ರಾಹುಲ್ ಮನವಿಯನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT