ದೇಶ

ಗುಜರಾತ್: ಚರಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಪೌರಕಾರ್ಮಿಕರಿಬ್ಬರು ಸಾವು

Nagaraja AB

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ಜಿಲ್ಲೆಯಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಪೌರಕಾರ್ಮಿಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಧೋಲ್ಕಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರು ಅಸ್ವಸ್ಥರಾಗಿದ್ದಾರೆ.  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಧೋಲ್ಕಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಇವರಿಬ್ಬರೂ ಚರಂಡಿ ಸ್ವಚ್ಚಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಉಸಿರುಗಟ್ಟಿ ಅವರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗುತ್ತಿಗೆದಾರರಾದ ಆಶಿಕ್ ಠಾಕೂರ್ ಮತ್ತು ಜಗದೀಶ್ ಠಾಕೂರ್ ವಿರುದ್ಧ ಐಪಿಸಿ ಸೆಕ್ಷನ್ 304, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ 11 ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ವಿಧಾನಸಭೆಗೆ ತಿಳಿಸಿತ್ತು.

SCROLL FOR NEXT