ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ 
ದೇಶ

ಬಾಕಿ ಇರುವ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ: ಹೈಕೋರ್ಟ್ ನ್ಯಾಯಾಧೀಶರಿಗೆ ಸಿಜೆಐ ತರಾಟೆ

ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.

ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರು ಬಾಕಿ ಇರುವ ಪ್ರಕರಣವೊಂದರ ಬಗ್ಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. 

ಬಾಕಿ ಇರುವ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಬೇಕಿಲ್ಲ. ಅದು ನಿಜವಾದರೆ, ಈ ಪ್ರಕರಣವನ್ನು ಅವರು ವಿಚಾರಣೆ ನಡೆಸಬೇಕಿಲ್ಲ. ಅವರು ಈ ರೀತಿ ಮಾಡಿದ್ದರೆ, ವಿಚಾರಣೆಯಲ್ಲಿ ಭಾಗವಹಿಸಬೇಕಿಲ್ಲ.

ಬಾಕಿ ಉಳಿದಿರುವ ವಿಷಯಗಳ ಕುರಿತು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುವುದು ನ್ಯಾಯಾಧೀಶರ ಕೆಲಸವಲ್ಲ. ಇದು ನಿಜವಾಗಿದ್ದರೆ, ಅವರು ಇನ್ನು ಮುಂದೆ ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಾವು ತನಿಖೆಯನ್ನು ಮಾಡುವುದಿಲ್ಲ. ಆದರೆ ಟಿವಿ ಚರ್ಚೆಯಲ್ಲಿ ಅರ್ಜಿದಾರರ ಬಗ್ಗೆ ನ್ಯಾಯಾಧೀಶರು ಅಭಿಪ್ರಾಯವನ್ನು ನೀಡಿದರೆ, ಅವರು ಆ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಂತರ ಹೈಕೋರ್ಟ್ ಮುಖ್ಯಸ್ಥರು ಹೊಸ ಪೀಠವನ್ನು ರಚಿಸಬೇಕು ಎಂದು ಸಿಜೆಐ ಹೇಳಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧದ ನೇಮಕಾತಿ ಹಗರಣದಲ್ಲಿ  ಅವರ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐ ಗೆ ನಿರ್ದೇಶಿಸುವುದರ ಪ್ರಕರಣದ ಬಗ್ಗೆ ಕೋರ್ಟ್ ಈಗ ಹೆಚ್ಚಿನ ಮಹತ್ವ ನೀಡುವುದಿಲ್ಲ. ಆದರೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ತಿಳಿಯುವುದು ಅಗತ್ಯವಾಗಿದೆ ಎಂದು ಚಂದ್ರಚೂಡ್ ಹೇಳಿದ್ದಾರೆ. 

ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತಮ್ಮನ್ನು ವಿಚಾರಣೆ ನಡೆಸಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿರುವ ಕೋಲ್ಕತ್ತ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಟಿಎಂ ಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ವೇಳೆ ಸಿಜೆಐ ಈ ಮಾತುಗಳನ್ನಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT