ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 6,904 ಸೋಂಕು ಪತ್ತೆ, 65 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,98,893ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,345ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 65,683ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,43,01,865ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 78,342 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,54,97,040 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,39,736 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ