ದೇಶ

ರಾಹುಲ್ ವಿರುದ್ಧದ ಮೋದಿ ಉಪನಾಮ ಪ್ರಕರಣ: ಕೆಳ ಹಂತದ ನ್ಯಾಯಾಲಯದ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆ

Srinivas Rao BV

ಪಾಟ್ನ: ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮೋದಿ ಉಪನಾಮ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದ ಆದೇಶವನ್ನು ಪಾಟ್ನಾ ಹೈಕೋರ್ಟ್ ತಡೆ ನೀಡಿದೆ. 

ಪಾಟ್ನಾದ ಕೆಳಹಂತದ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.12 ರಂದು  ಕೋರ್ಟ್ ಎದುರು ಹಾಜರಾಗುವಂತೆ ಸೂಚಿಸಿತ್ತು. ಕೆಳಹಂತದ ಈ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಪಾಟ್ನಾ ಹೈಕೋರ್ಟ್ ಮೊರೆ ಹೋಗಿದ್ದರು. 

ಬಿಜೆಪಿಯ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ರಾಹುಲ್ ಗಾಂಧಿ ವಿರುದ್ಧ ಪಾಟ್ನಾದ ಎಂಪಿ/ ಎಂಎಲ್ಎ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಮಾ.18 ರಂದು ಎಂಪಿ/ಎಂಎಲ್ಎ ಕೋರ್ಟ್ ನ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ರಾಹುಲ್ ಗಾಂಧಿ ಅವರಿಗೆ ಏ.12 ರಂದು ಹಾಜರಾಗುವಂತೆ ಸೂಚಿಸಿದ್ದರು.

ಆದಾಗ್ಯೂ, ವಿಚಾರಣೆಯ ಸಂದರ್ಭದಲ್ಲಿ, ಪ್ರತಿವಾದಿ ವಕೀಲರು ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ, ಇದರಲ್ಲಿ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ, ನ್ಯಾಯಾಧೀಶರು ಏಪ್ರಿಲ್ 25 ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ವಕೀಲರಿಗೆ ಸೂಚನೆ ನೀಡಿದ್ದಾರೆ.

SCROLL FOR NEXT