ಸುಪ್ರೀಂಕೋರ್ಟ್ 
ದೇಶ

ಬೇಷರತ್ ಕ್ಷಮೆಯಾಚನೆ: ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯಗೊಳಿಸಿದ 'ಸುಪ್ರೀಂ'

ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. 

ನವದೆಹಲಿ: ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. 

ಭವಿಷ್ಯದಲ್ಲಿ ಲಲಿತ್ ಮೋದಿ ಅವರು ನ್ಯಾಯಾಂಗದ ವರ್ಚಸ್ಸಿಗೆ ಕಳಂಕ ತರುವಂತಹ ಯಾವುದೇ ಚಟುವಟಿಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ಮಂಗಳವಾರ ಲಲಿತ್ ಮೋದಿ ಅವರು ಬೇಷರತ್ ಕ್ಷಮೆ ಯಾಚಿಸಿದ್ದರು. ಸುಪ್ರೀಂಕೋರ್ಟ್ ಏಪ್ರಿಲ್ 13ರ ಆದೇಶದ ನಂತರ, ಅವರು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ಇಮೇಜ್‌ಗೆ ಕಳಂಕ ತಂದ ಟ್ವೀಟ್‌ಗಳಿಗೆ ಕ್ಷಮೆಯಾಚಿಸಿದ್ದರು.

ಲಲಿತ್ ಮೋದಿ ಸಲ್ಲಿಸಿದ ಅಫಿಡವಿಟ್ ಅನ್ನು ನ್ಯಾಯಮೂರ್ತಿ ಎಂಆರ್ ಷಾ ಮತ್ತು ನ್ಯಾಯಮೂರ್ತಿ ಸಿಟಿ ರವಿಕುಮಾರ್ ಅವರ ಪೀಠವು ಗಮನಕ್ಕೆ ತಂದಿತು. ಇದರಲ್ಲಿ ಅವರು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ನ್ಯಾಯಾಲಯದ "ವೈಭವ ಅಥವಾ ಘನತೆ"ಗೆ ಕುಂದು ತರುವಂತಹ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. 

ಲಲಿತ್ ಮೋದಿ, ನಾವು ಬೇಷರತ್ ಕ್ಷಮೆಯನ್ನು ಸ್ವೀಕರಿಸುತ್ತೇವೆ. ಭವಿಷ್ಯದಲ್ಲಿ ಭಾರತೀಯ ನ್ಯಾಯಾಂಗ ಮತ್ತು ನ್ಯಾಯಾಲಯಗಳ ಪ್ರತಿಷ್ಠೆಯನ್ನು ಹಾಳುಮಾಡುವ ಯಾವುದೇ ಕೆಲಸ ಮಾಡುವುದಿಲ್ಲ. ನಾವು ಮುಕ್ತ ಹೃದಯದಿಂದ ಬೇಷರತ್ತಾದ ಕ್ಷಮೆಯನ್ನು ಕೇಳುತ್ತೇನೆ, ಏಕೆಂದರೆ ನ್ಯಾಯಾಲಯವು ಯಾವಾಗಲೂ ಕ್ಷಮೆಯಾಚನೆಯನ್ನು ಸ್ವೀಕರಿಸುತ್ತದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video