ದೇಶ

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ

Nagaraja AB

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸದ ಬಳಿ ಡ್ರೋನ್ ಪತ್ತೆ ಮಾಹಿತಿ ಲಭಿಸಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇದು ಮಾನವ ರಹಿತ ವಿಮಾನ ಹಾರಾಟ ನಿರ್ಬಂಧಿತ ವಲಯವಾಗಿದ್ದು, ಡ್ರೋನ್ ಪತ್ತೆಯಾದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದ್ದು, ಸತ್ಯಾಂಶವನ್ನು ಪರಿಶೀಲಿಸುತ್ತಿದ್ದೇವೆ' ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪೊಲೀಸರು ಸತ್ಯಾಂಶವನ್ನು ಪರಿಶೀಲಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

SCROLL FOR NEXT