ದೇಶ

ಮೊಬೈಲ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಸಾವು

Ramyashree GN

ತ್ರಿಶೂರ್: ಎಂಟು ವರ್ಷದ ಬಾಲಕಿಯೊಬ್ಬಳು ಬಳಸುತ್ತಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತಿರುವಿಲ್ವಾಮಲ ನಿವಾಸಿ ಆದಿತ್ಯಶ್ರೀ ಎಂಬ ಬಾಲಕಿ ಬಳಸುತ್ತಿದ್ದ ಮೊಬೈಲ್ ಫೋನ್ ಸೋಮವಾರ ರಾತ್ರಿ 10.30 ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿದೆ ಎಂದು ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆದಿತ್ಯಶ್ರೀ ಸಮೀಪದ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುತ್ತಿದ್ದಳು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT