ರಾಹುಲ್ ಗಾಂಧಿ 
ದೇಶ

'ಮೋದಿ ಉಪನಾಮ' ಪ್ರಕರಣ: ಸೂರತ್ ಕೋರ್ಟ್ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್‌ ಗೆ ರಾಹುಲ್ ಗಾಂಧಿ ಅರ್ಜಿ

'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ 'ಅನರ್ಹಿತ' ಸಂಸದ ರಾಹುಲ್ ಗಾಂಧಿ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸೂರತ್: 'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ 'ಅನರ್ಹಿತ' ಸಂಸದ ರಾಹುಲ್ ಗಾಂಧಿ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಗುಜರಾತ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ  ಕಳೆದ ವಾರದ 52 ವರ್ಷದ ರಾಹುಲ್ ಗಾಂಧಿ ಅವರು ಅಹಮದಾಬಾದ್‌ನ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ವಕೀಲ ಬಿಎಂ ಮಂಗೂಕಿಯಾ ಖಚಿತಪಡಿಸಿದ್ದಾರೆ.

ಗುಜರಾತ್ ಭಾರತೀಯ ಜನತಾ ಪಕ್ಷದ ಶಾಸಕ ಪೂರ್ಣೇಶ್ ಮೋದಿ ಅವರು ಸಲ್ಲಿಸಿದ 2019 ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ 499 ಮತ್ತು 500 (ಕ್ರಿಮಿನಲ್ ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿದ ನಂತರ ಮಾರ್ಚ್ 23 ರಂದು ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾಜಿ ಕಾಂಗ್ರೆಸ್ ಅಧ್ಯಕ್ಷರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ತೀರ್ಪಿನ ನಂತರ, 2019 ರಲ್ಲಿ ಕೇರಳದ ವಯನಾಡಿನಿಂದ ಲೋಕಸಭೆಗೆ ಚುನಾಯಿತರಾಗಿದ್ದ ರಾಹುಲ್ ಗಾಂಧಿ ಅವರನ್ನು, ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸತ್ತಿನ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಏಪ್ರಿಲ್ 20 ರಂದು ಸೂರತ್ ಸೆಷನ್ಸ್ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT