ಪಂಜಾಬ್ ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ
ಪಂಜಾಬ್ ನ ಮಾಜಿ ಸಿಎಂ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿಧನರಾಗಿದ್ದಾರೆ.
ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿಧನರಾಗಿದ್ದಾರೆ.
ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ದಾಖಲಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ನಿಧನ ಸುದ್ದಿಯನ್ನು ಅವರ ಆಪ್ತ ಸಹಾಯಕರು ಹಾಗೂ ಪುತ್ರರು ದೃಢಪಡಿಸಿದ್ದಾರೆ. ಪಂಜಾಬ್ನಲ್ಲಿ ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಮುಖ್ಯಮಂತ್ರಿಯಾಗಿದ್ದರು.
ಪ್ರಕಾಶ್ ಸಿಂಗ್ ಬಾದಲ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಾದಲ್ ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.