ಪೂಂಚ್ ನಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ 
ದೇಶ

ಪೂಂಚ್ ದಾಳಿ: ಸೇನಾ ವಾಹನದ ಮೇಲೆ 50 ಬುಲೆಟ್ ಗುರುತು ಪತ್ತೆ

ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. 

ಶ್ರೀನಗರ: ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ಹೆಡೆಮುರಿಕಟ್ಟಲು ಭಟ ಧುರಿಯನ್-ತೋಟ ಗಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಬೃಹತ್ ಶೋಧಕರ್ಯಾಚರಣೆ ನಡೆದಿದೆ.

ವಿಶೇಷ ಪಡೆಗಳು ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಕೂಡ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ, ಡ್ರೋನ್‌ಗಳು, ಸ್ನಿಫರ್ ಡಾಗ್‌ಗಳು ಮತ್ತು ಮೆಟಲ್ ಡಿಟೆಕ್ಟರ್‌ಗಳನ್ನು ಈ ಕಾರ್ಯಾಚರಣೆಯಲ್ಲಿ ಬಳಸಲಾಗುತ್ತಿದೆ.

ದಾಳಿಗೆ ಸಂಬಂಧಿಸಿದಂತೆ 14 (ಓವರ್ ಗ್ರೌಂಡ್ ವರ್ಕರ್ ಗಳು) ಸೇರಿದಂತೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಮತ್ತು ಅವರಲ್ಲಿ ಕೆಲವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

7-8 ಭಯೋತ್ಪಾದಕರ ಎರಡು ಗುಂಪು ಈ ದಾಳಿಯನ್ನು ರೂಪಿಸಿದೆ ಎಂದು ನಂಬಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಪ್ರಕಾರ, ಭಯೋತ್ಪಾದಕರು ವಾಹನದ ಮೇಲೆ ದಾಳಿ ಮಾಡುವ ಮೊದಲು ಈ ರಸ್ತೆಯ ಕಲ್ವರ್ಟ್‌ನಲ್ಲಿ ಅಡಗಿಕೊಂಡಿದ್ದರು ಎಂದು ವರದಿಯಾಗಿದೆ. ದಾಳಿಗೆ ಗುರಿಯಾದ ವಾಹನದಲ್ಲಿ 50 ಕ್ಕೂ ಹೆಚ್ಚು ಗುಂಡಿನ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಈ ಪ್ರದೇಶದಲ್ಲಿ ಕೆಲವು ನೈಸರ್ಗಿಕ ಗುಹೆಗಳಲ್ಲಿ ಅಡಗುತಾಣಗಳನ್ನು ಸೇನಾ ಪಡೆಗಳು ಪತ್ತೆ ಮಾಡಿವೆ, ಇದನ್ನು ಈ ಹಿಂದೆ ಭಯೋತ್ಪಾದಕರು ಬಳಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT