ಪ್ರಾತಿನಿಧಿಕ ಚಿತ್ರ 
ದೇಶ

ಈಜುಕೊಳದಲ್ಲಿದ್ದ ಹಿರಿಯ ನಾಗರಿಕನ ಮೇಲೆ ಎತ್ತರದಿಂದ ಜಿಗಿದ ವ್ಯಕ್ತಿ; 72 ವರ್ಷದ ವೃದ್ಧ ಸಾವು

ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ  72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ  72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೋರೆಗಾಂವ್ ಪ್ರದೇಶದ ಓಝೋನ್ ಈಜುಕೊಳದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.

ಮೃತರನ್ನು ವಿಷ್ಣು ಸಾಮಂತ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತರು ಈಜುತ್ತಿದ್ದ ವೇಳೆ 20 ವರ್ಷದ ಯುವಕನೊಬ್ಬ ಮೇಲಿನಿಂದ ಕೊಳದೊಳಗೆ ಧುಮುಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

'ಸಾಮಂತ್ ಅವರ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ. ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. 

ಸಂತ್ರಸ್ತರ ಪತ್ನಿ ನೀಡಿರುವ ದೂರಿನ ಮೇರೆಗೆ 20 ವರ್ಷದ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT