ಜೈರಾಮ್ ರಮೇಶ್ 
ದೇಶ

ಕೈ ಅಧಿಕಾರಕ್ಕೆ ಬಂದರೆ ಗಲಭೆ: ಅಮಿತ್ ಶಾ ಹೇಳಿಕೆ ನಿರ್ಲಜ್ಜತನದ, ಬೆದರಿಕೆ ತಂತ್ರ ಎಂದ ಕಾಂಗ್ರೆಸ್

ದೇಶದ ಅತ್ಯಂತ ಹಳೆಯ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳು ನಡೆಯಲಿವೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಅತ್ಯಂತ ನಿರ್ಲಜ್ಯತನದ ಹೇಳಿಕೆ ಮತ್ತು "ಬೆದರಿಕೆ" ಹಾಕಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ನವದೆಹಲಿ: ದೇಶದ ಅತ್ಯಂತ ಹಳೆಯ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳು ನಡೆಯಲಿವೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಅತ್ಯಂತ ನಿರ್ಲಜ್ಯತನದ ಹೇಳಿಕೆ ಮತ್ತು "ಬೆದರಿಕೆ" ಹಾಕಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ರಾಜ್ಯದ ಅಭಿವೃದ್ಧಿ "ರಿವರ್ಸ್ ಗೇರ್" ಸಾಗುತ್ತದೆ ಎಂದು ಹೇಳಿದ್ದರು.

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಂಶಾಡಳಿತ ರಾಜಕೀಯವು ಸಾರ್ವಕಾಲಿಕ ಉತ್ತುಂಗಕ್ಕೆ ಏರಲಿದೆ ಮತ್ತು ಕರ್ನಾಟಕ ಗಲಭೆ ಪೀಡಿತ ರಾಜ್ಯವಾಗಲಿದೆ" ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದರು.

ಇಂದು ಅಮಿತ್ ಶಾಗೆ ತಿರುಗೇಟು ನೀಡಿದ ಕಾಂಗ್ರೆಸ್‌ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆ ಎಂದಿದ್ದಾರೆ.

ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video