ಸುಪ್ರೀಂ ಕೋರ್ಟ್ 
ದೇಶ

ತಲಾಖ್ ಪದ್ಧತಿ ಕಡಿವಾಣಕ್ಕೆ ಮುಸ್ಲಿಂ ವಿವಾಹ ರಕ್ಷಣೆ ಹಕ್ಕುಕಾಯ್ದೆ ಅಗತ್ಯ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ಸರ್ವೋಚ್ಛ ನ್ಯಾಯಾಲಯ 2017 ರಲ್ಲಿ ಶರಿಯಾ ಬಾನೊ ಪ್ರಕರಣದಲ್ಲಿ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವ ಪದ್ಧತಿಯನ್ನು ನಿಷೇಧಿಸಿತ್ತಾದರೂ ಅದು ತಲಾಖ್ ಪದ್ಧತಿಯನ್ನು ತಡೆಯುವಲ್ಲಿ ವಿಫಲವಾಗಿದೆ- ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

ನವದೆಹಲಿ: ಸರ್ವೋಚ್ಛ ನ್ಯಾಯಾಲಯ 2017 ರಲ್ಲಿ ಶರಿಯಾ ಬಾನೊ ಪ್ರಕರಣದಲ್ಲಿ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವ ಪದ್ಧತಿಯನ್ನು ನಿಷೇಧಿಸಿತ್ತಾದರೂ ಅದು ತಲಾಖ್ ಪದ್ಧತಿಯನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ.
 
ದೇಶದ ವಿವಿಧ ಪ್ರದೇಶಗಳಲ್ಲಿ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವ ಪ್ರಕರಣಗಳು ವರದಿಯಾಗುತ್ತಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.
 
ಸುಪ್ರೀಂ ಕೋರ್ಟ್ ನ 2017 ರ ತೀರ್ಪನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕಷ್ಟೇ ಅಲ್ಲದೇ, ಅಕ್ರಮ ವಿಚ್ಛೇದನ ಪದ್ಧತಿಯ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ಮುಸ್ಲಿಂ (ವಿವಾಹ ರಕ್ಷಣೆ ಹಕ್ಕು) ಕಾಯ್ದೆ 2019, ನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.

ತ್ರಿವಳಿ ತಲಾಖ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಯ ನಿಬಂಧನೆಗಳ ಅನುಪಸ್ಥಿತಿಯಲ್ಲಿ ಪೊಲೀಸರು ಅಸಹಾಯಕರಾಗಿದ್ದಾರೆ ಮತ್ತು ತಪ್ಪಿತಸ್ಥ ಪತಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು  ಕೇಂದ್ರ ಸರ್ಕಾರದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT