ಕಾಂಗ್ರೆಸ್ 
ದೇಶ

ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಐವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ಪ್ರಾದೇಶಿಕ ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಮಧ್ಯ ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ, ಎ ಚೆಲ್ಲಕುಮಾರ್ ಮೈಸೂರು ಪ್ರದೇಶಕ್ಕೆ ಮತ್ತು ಮಾಣಿಕಂ ಟ್ಯಾಗೋರ್ ಮುಂಬೈ-ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಕ್ಷದ ನಾಯಕ ಅಜೋಯ್ ಕುಮಾರ್ ಅವರನ್ನು ಕರಾವಳಿ ಕರ್ನಾಟಕ ಪ್ರದೇಶಕ್ಕೆ ಪ್ರಾದೇಶಿಕ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಮೋಹನ್ ಪ್ರಕಾಶ್ ಅವರು ರಾಜ್ಯದ ಉತ್ತರ ಭಾಗದಲ್ಲಿರುವ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಏಕೈಕ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT