ಮಾಜಿ ಸಂಸದ ಆನಂದ್ 
ದೇಶ

ಬಿಹಾರ ಜೈಲು ನಿಯಮಗಳಿಗೆ ತಿದ್ದುಪಡಿ ನಂತರ ಮಾಜಿ ಸಂಸದ ಆನಂದ್ ಮೋಹನ್ ಜೈಲಿನಿಂದ ಬಿಡುಗಡೆ

ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪಾಟ್ನಾ: ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸಿಂಗ್ ಸೇರಿದಂತೆ 27 ಅಪರಾಧಿಗಳನ್ನು ಶೀಘ್ರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಇತ್ತೀಚೆಗೆ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಜೈಲು ಶಿಕ್ಷೆ ಪರಿಹಾರ ಆದೇಶದ ಅಡಿಯಲ್ಲಿ ಸಿಂಗ್ ಬಿಡುಗಡೆಗೆ ಅವಕಾಶ ನೀಡಲಾಗಿದೆ.

1994ರಲ್ಲಿ ಮುಜಾಫರ್‌ಪುರದ ದರೋಡೆಕೋರ ಚೋಟಾನ್ ಶುಕ್ಲಾ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಯುವ ಐಎಎಸ್ ಅಧಿಕಾರಿಯಾಗಿದ್ದ ಗೋಪಾಲ್‌ಗಂಜ್ ಕಲೆಕ್ಟರ್ ಜಿ ಕೃಷ್ಣಯ್ಯ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಆನಂದ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಕಳೆದ 15 ವರ್ಷಗಳಿಂದ ಜೈಲಿನಲ್ಲಿರುವ ಆನಂದ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅಕ್ಟೋಬರ್ 2007 ರಲ್ಲಿ ಸ್ಥಳೀಯ ನ್ಯಾಯಾಲಯ ಆನಂದ್ ಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಆನಂದ್ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್ ಡಿಸೆಂಬರ್ 2008 ರಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ನಿತೀಶ್ ಕುಮಾರ್ ಸರ್ಕಾರ, ಏಪ್ರಿಲ್ 10 ರಂದು, ಬಿಹಾರ ಜೈಲು ಕೈಪಿಡಿ, 2012 ಅನ್ನು ತಿದ್ದುಪಡಿ ಮಾಡಿತು ಮತ್ತು 'ಕರ್ತವ್ಯದಲ್ಲಿರುವ ಸಾರ್ವಜನಿಕ ಸೇವಕರ ಹತ್ಯೆ' ಪ್ರಕರಣದ ಅಪರಾಧಿಗಳಿಗೆ ಅವರ ಜೈಲು ಶಿಕ್ಷೆಯಲ್ಲಿ ವಿನಾಯತಿ ನೀಡಲಾಗುವುದಿಲ್ಲ ಎಂಬ ಷರತ್ತನ್ನು ತೆಗೆದುಹಾಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT