ಸಾಂದರ್ಭಿಕ ಚಿತ್ರ 
ದೇಶ

ಶಾಲಾ ಆವರಣದಲ್ಲಿಯೇ 8ನೇ ತರಗತಿ ವಿದ್ಯಾರ್ಥಿಯ ಥಳಿಸಿ ಹತ್ಯೆ; ಮೃತದೇಹವನ್ನು ಚರಂಡಿಗೆ ಎಸೆದ ಹುಡುಗರು

ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಬದರ್‌ಪುರ ಪ್ರದೇಶದ ಎಂಸಿಡಿ ಸರ್ಕಾರಿ ಶಾಲೆಯ ಬಳಿ 8ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಗುರುವಾರ ತಡರಾತ್ರಿ ನಡೆದಿದೆ.

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಬದರ್‌ಪುರ ಪ್ರದೇಶದ ಎಂಸಿಡಿ ಸರ್ಕಾರಿ ಶಾಲೆಯ ಬಳಿ 8ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಇಬ್ಬರು ಹುಡುಗರು ಶಾಲಾ ವಿದ್ಯಾರ್ಥಿಯಾಗಿರುವ ಮಗುವನ್ನು ಹೊಡೆದು ಶಾಲೆಯ ಬಳಿಯ ಚರಂಡಿಗೆ ಎಸೆದಿದ್ದಾರೆ ಎಂದು ಮಹಿಳೆಯೊಬ್ಬರು ರಾತ್ರಿ 8.20ಕ್ಕೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರಿಗೆ, ಚರಂಡಿಯಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಸುಮಾರು 12-13 ವರ್ಷದ ಬಾಲಕನ ಶವ ಪತ್ತೆಯಾಗಿದೆ.
ಮೃತ ಬಾಲಕನನ್ನು ಮೊಲರಬಂದ್ ಗ್ರಾಮದ ಬಿಲಾಸ್‌ಪುರ ಕ್ಯಾಂಪ್ ನಿವಾಸಿ ಸೌರಭ್ (12) ಎಂದು ಗುರುತಿಸಲಾಗಿದೆ. ಆತ ತಾಜ್‌ಪುರ ಪಹಾರಿ ಎಂಸಿಡಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಹವನ್ನು ಪರಿಶೀಲಿಸಿದಾಗ, ಮೊಂಡಾದ ವಸ್ತುವಿನಿಂದ ತಲೆಗೆ ಅನೇಕ ಗಾಯಗಳನ್ನು ಮಾಡಿರುವುದು ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಶಾಲಾ ಬ್ಯಾಗ್ ಮತ್ತು ದೇಹದ ಬಳಿ ನಾಲ್ಕರಿಂದ ಐದು ರಕ್ತಸಿಕ್ತ ಕಲ್ಲುಗಳು (ಇಟ್ಟಿಗೆಗಳು) ಇರುವುದು ಕಂಡುಬಂದಿದ್ದು, ಈ ಕಲ್ಲುಗಳನ್ನು ಅಪರಾಧದಕ್ಕೆ ಬಳಸಲಾಗಿದೆ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ನಾವು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಆಗ್ನೇಯ ಜಿಲ್ಲೆಯ ಅಪರಾಧ ತಂಡವು ಅಪರಾಧದ ಸ್ಥಳವನ್ನು ಪರಿಶೀಲಿಸಿದೆ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಘೋರ ಅಪರಾಧದ ಹಿಂದಿರುವ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಅವರನ್ನು ಬಂಧಿಸಲು ಪೊಲೀಸ್ ತಂಡಗಳು ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ' ಎಂದು ಅಧಿಕಾರಿ ಹೇಳಿದರು.

ಮೃತ ದೇಹವನ್ನು ಏಮ್ಸ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT