ಸಾಂದರ್ಭಿಕ ಚಿತ್ರ 
ದೇಶ

ಪೂರ್ವ ಭಾರತದಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ: ಐಎಂಡಿ

ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ನವದೆಹಲಿ: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಆದಾಗ್ಯೂ, ಈ ಶಾಖ ಸೂಚ್ಯಂಕವು ಅಮೆರಿಕ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ ಸೂತ್ರವನ್ನು ಆಧರಿಸಿದೆ. ಭಾರತದ ಮೇಲಿನ ತಾಪಮಾನವನ್ನು ಮೌಲ್ಯೀಕರಿಸಿಲ್ಲ.

ಶಾಖ ಸೂಚ್ಯಂಕವು ಸಾಪೇಕ್ಷ ಆರ್ದ್ರತೆ ಮತ್ತು ಗಾಳಿಯ ಉಷ್ಣತೆಯೊಂದಿಗೆ ಸಂಯೋಜಿಸಿದಾಗ ಮಾನವ ದೇಹ ಅನುಭವಿಸುವ ತಾಪಮಾನವನ್ನು ಅಳೆಯುವ ಸೂಚ್ಯಂಕವಾಗಿದೆ. "ಈ ಸೂಚ್ಯಂಕವು ಅಮೆರಿಕ ಹವಾಮಾನ ಸಂಸ್ಥೆಯ ಸಾಗರ ಮತ್ತು ವಾಯುಮಂಡಲದ ಆಡಳಿತ ಸೂತ್ರವನ್ನು ಆಧರಿಸಿದೆ. ಇದು ಭಾರತದ ಮೇಲಿನ ತಾಪಮಾನವನ್ನು ಮೌಲ್ಯೀಕರಿಸಿಲ್ಲ" ಎಂದು ಐಎಂಡಿ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮೊಹಾಪಾತ್ರ ಅವರು ಹೇಳಿದ್ದಾರೆ.

"ನಾವು ಅದನ್ನು ಪರಿಮಾಣದ ಬದಲಿಗೆ ಗುಣಾತ್ಮಕವಾಗಿ(ನಿರ್ದಿಷ್ಟ ಸ್ಥಳ) ಓದಬೇಕು ಮತ್ತು ಜನ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು" ಎಂದು ಅವರು ತಿಳಿಸಿದ್ದಾರೆ.

ಬಿಹಾರ, ಜಾರ್ಖಂಡ್ ಮತ್ತು ಒಡಿಶಾ ಸೇರಿದಂತೆ ಪೂರ್ವ ಭಾರತದ ಕೆಲವು ಭಾಗಗಳು ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಎದುರಿಸುವ ಸಾಧ್ಯತೆಯಿದೆ ಮತ್ತು ಕೆಲವು ದಿನಗಳಲ್ಲಿ ಉಷ್ಣಹವೆ  ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT