ದೇಶ

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತ, ಸಾವಿನ ಸಂಖ್ಯೆ 3ಕ್ಕೆ ಏರಿಕೆ

Nagaraja AB

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದು, ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಘಟನೆ ದುರದೃಷ್ಟಕರವಾಗಿದ್ದು, 12 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಎನ್ ಡಿಆರ್ ಎಫ್ ಮತ್ತು ಟಿಡಿಆರ್ ಎಫ್ ಮತ್ತಿತರ ಏಜೆನ್ಸಿಗಳಿಂದ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಮೃತರ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ ಎಂದು ಹೇಳಿದರು. 

ಕಟ್ಟಡ ಪುನರ್ ನಿರ್ಮಾಣ ಸಂಬಂಧ ಪ್ರಸ್ತಾವನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಏಕನಾಥ್ ಶಿಂಧೆ, ಈ ಬಗ್ಗೆ ಶೀಘ್ರದಲ್ಲೇ ನಿರ್ಧರಿಸಲಾಗುವುದು, ಮಳೆಗಾಲದಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. 

SCROLL FOR NEXT