ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ವೇಳೆ ಸಾಕ್ಷಿ ಮಲಿಕ್ ಅಭ್ಯಾಸದಲ್ಲಿ ನಿರತವಾಗಿರುವುದು 
ದೇಶ

ಪೋಕ್ಸೋ ಕಾಯ್ದೆಯಡಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೇಸು ದಾಖಲು, ಬಿಜೆಪಿ ಸಂಸದನ ಬಂಧನಕ್ಕೆ ಕುಸ್ತಿಪಟುಗಳು ಪಟ್ಟು!

ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೆಲವೇ ಗಂಟೆಗಳ ನಂತರ, ಲೈಂಗಿಕ ಕಿರುಕುಳ ಸಂಬಂಧಿ ಬಿಜೆಪಿ ನಾಯಕನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೆಲವೇ ಗಂಟೆಗಳ ನಂತರ, ಲೈಂಗಿಕ ಕಿರುಕುಳ ಸಂಬಂಧಿ ಬಿಜೆಪಿ ನಾಯಕನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಹರಿಸಿದ್ದರು. 

ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇರೆಗೆ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮೊದಲ ಎಫ್‌ಐಆರ್ ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ. 

ವಯಸ್ಕ ಮಹಿಳಾ ಕುಸ್ತಿಪಟುಗಳ ದೂರುಗಳ ಬಗ್ಗೆ ಸಮಗ್ರ ತನಿಖೆಗಾಗಿ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ, ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎರಡೂ ಎಫ್‌ಐಆರ್‌ಗಳ ತನಿಖೆಯನ್ನು ಸೂಕ್ತವಾಗಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ತಾವು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸದಿರುವ ಬಗ್ಗೆ ಏಳು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಪೀಠವು ವಿಚಾರಣೆ ನಡೆಸುತ್ತಿದೆ.

ಲೈಂಗಿಕ ಕಿರುಕುಳವು 2014 ರ ಹಿಂದಿನದು ಎಂದು ವರದಿಗಳು ಹೇಳಿವೆ. ಲಕ್ನೋದಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಮಹಿಳಾ ಕುಸ್ತಿ ಶಿಬಿರದ ಫಿಸಿಯೋಥೆರಪಿಸ್ಟ್, ಮಹಿಳಾ ಕುಸ್ತಿಪಟುಗಳಿಗೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಿದ್ದಾರೆ. ಶರಣ್ ಸಿಂಗ್ ಅವರು ಬಿಜೆಪಿ ಸಂಸದರೂ ಆಗಿರುವುದು ಪ್ರಕರಣಕ್ಕೆ ವಿಶೇಷ ಮಹತ್ವ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT