ಸಾಂದರ್ಭಿಕ ಚಿತ್ರ 
ದೇಶ

ಜಮ್ಮು: ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರ ನಿಯೋಜನೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ.

ಜಮ್ಮುವಿನ ಎಲ್ಲಾ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪುರುಷ ಪೊಲೀಸರೊಂದಿಗೆ ಮೊದಲ ಬಾರಿ ಮಹಿಳಾ ಸಿಬ್ಬಂದಿಯನ್ನೂ ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮಹಿಳಾ ಮಾದಕವಸ್ತು ಕಳ್ಳಸಾಗಣೆದಾರರ ಮೇಲೆ ಕಣ್ಣಿಡಲು ಮತ್ತು ರಾತ್ರಿಯಲ್ಲಿ ಮಹಿಳೆಯರಿಗೆ ಸಹಾಯ ಮಾಡಲು ಜಮ್ಮು ನಗರದ ಚೆಕ್‌ಪೋಸ್ಟ್‌ಗಳಲ್ಲಿ ಮಹಿಳೆಯರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರನ್ನು ನೇಮಿಸಲಾಗಿದೆ ಅವರು ಹೇಳಿದ್ದಾರೆ.

ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸುತ್ತಾರೆ.

ಇಲ್ಲಿಯವರೆಗೆ, ಜಮ್ಮು ನಗರದ 12 ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳ ಮೇಲೆ ಕಣ್ಣಿಡಲು ಮಾತ್ರವಲ್ಲದೆ ಮಹಿಳೆಯರಿಗೆ, ವಿಶೇಷವಾಗಿ ರಾತ್ರಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಹಿಳಾ ಡ್ರಗ್ ಡೀಲರ್‌ಗಳ ಶಾಮೀಲಾಗಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್‌ಗಳ ನಿಯೋಜನೆಯಿಂದ ಅನುಮಾನಾಸ್ಪದ ಚಲನವಲನಗಳ ಮೇಲೆ ನಿಗಾ ಇಡಲು ಮತ್ತು ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video