ಜಗದೀಶ್ ಟೈಟ್ಲರ್ 
ದೇಶ

ಸಿಖ್ ವಿರೋಧಿ ದಂಗೆ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಟೈಟ್ಲರ್!

1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಮಂಗಳವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ.  

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಮಂಗಳವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ.  

ನಾಳೆ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಕಳೆದ ವಾರ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ  ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಿಬಿಐ ಮೇ 20ರಂದು ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನವೆಂಬರ್ 1, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಒಂದು ದಿನದ ನಂತರ ಮೂವರನ್ನು ಕೊಂದು ಗುರುದ್ವಾರವನ್ನು ಸುಟ್ಟು ಹಾಕಲಾಗಿತ್ತು.

ನವೆಂಬರ್ 1, 1984 ರಂದು ಆಜಾದ್ ಮಾರ್ಕೆಟ್‌ನ ಪುಲ್ ಬಂಗಾಶ್ ಗುರುದ್ವಾರದಲ್ಲಿ ನೆರೆದಿದ್ದ ಜನರನ್ನು ಟೈಟ್ಲರ್ ಪ್ರಚೋದಿಸಿದ್ದರು. ಅದರ ಪರಿಣಾಮವಾಗಿ ಗುರುದ್ವಾರಕ್ಕೆ ಬೆಂಕಿ ಹಚ್ಚಿ  ಮೂವರು ಸಿಖ್ಖರಾದ ಠಾಕೂರ್ ಸಿಂಗ್, ಬಾದಲ್ ಸಿಂಗ್ ಮತ್ತು ಗುರು ಚರಣ್ ಸಿಂಗ್ ಹತ್ಯೆ ಮಾಡಲಾಗಿತ್ತು ಎಂದು ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಟೈಟ್ಲರ್ ವಿರುದ್ಧ ಭಾರತೀಯ ದಂಡ ಸಂಹಿತೆಯ  ಸೆಕ್ಷನ್ 302 (ಕೊಲೆ) ಸೆಕ್ಷನ್ 147 (ಗಲಭೆ) 109 (ಪ್ರಚೋದನೆ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT