ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಳೆದ ಐದು ವರ್ಷಗಳಲ್ಲಿ ಗುಜರಾತ್‌ನಲ್ಲಿ 81 ಲಾಕಪ್ ಡೆತ್; ಇದು ದೇಶದಲ್ಲಿಯೇ ಅತಿ ಹೆಚ್ಚು

ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 1 Aug 2023, 8:15 pm

ನವದೆಹಲಿ: ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ.

ಗುಜರಾತ್ ನಂತರ ಮಹಾರಾಷ್ಟ್ರದಲ್ಲಿ ಲಾಕಪ್ ಡೆತ್ ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ 80 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಇದನ್ನು ಓದಿ: ಗುಜರಾತ್‌ನ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ​

Advertisement

Advertisement

ಏಪ್ರಿಲ್ 1, 2018 ರಿಂದ ಮಾರ್ಚ್ 31, 2023 ರವರೆಗೆ ದೇಶದ ವಿವಿಧ ಭಾಗಗಳಲ್ಲಿ 687 ಜನ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.

ಗುಜರಾತ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ 81 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ ಈ ಅವಧಿಯಲ್ಲಿ 80 ಸಾವುಗಳು ಸಂಭವಿಸಿವೆ ಎಂದು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 50, ಬಿಹಾರದಲ್ಲಿ 47, ಉತ್ತರ ಪ್ರದೇಶದಲ್ಲಿ 41 ಮತ್ತು ತಮಿಳುನಾಡಿನಲ್ಲಿ 36 ಪೊಲೀಸ್ ಕಸ್ಟಡಿ ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement